alex Certify ನಾಯಕತ್ವ ಬದಲಾವಣೆ ಪ್ರಶ್ನೆಗೆ ಹೀಗಿತ್ತು ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಾಯಕತ್ವ ಬದಲಾವಣೆ ಪ್ರಶ್ನೆಗೆ ಹೀಗಿತ್ತು ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯಪಾಲರೊಂದಿಗೆ ರಾಜಕೀಯ ವಿಷಯಗಳ ಬಗ್ಗೆ ಚರ್ಚೆ ಮಾಡಿಲ್ಲವೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ರಾಜ್ಯಪಾಲರ ಭೇಟಿಯ ಬಳಿಕ ಮಾತನಾಡಿದ ಅವರು, ರಾಜ್ಯಪಾಲರಿಗೆ ಕಣ್ಣಿನ ಆಪರೇಷನ್ ಆಗಿತ್ತು. ಅವರ ಆರೋಗ್ಯವನ್ನು ವಿಚಾರಿಸಲು ಬಂದಿದ್ದೆ. ಸುದೀರ್ಘವಾಗಿ ಅನೇಕ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಶಾಸಕ ರಮೇಶ್ ಜಾರಕಿಹೊಳಿ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಯಾವುದೇ ವಿಚಾರಗಳ ಬಗ್ಗೆ ಪ್ರತಿಕ್ರಿಯೆ ಕೊಡುವುದಿಲ್ಲ. ಎರಡು ವರ್ಷಗಳ ಬಳಿಕ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಬೇಕಿದೆ. 150 ಕ್ಕೂ ಹೆಚ್ಚು ಸ್ಥಾನಗಳಲ್ಲಿ ನಾವು ಗೆಲ್ಲಬೇಕಾಗಿದೆ. ಮತ್ತೆ ಪಕ್ಷ ಅಧಿಕಾರಕ್ಕೆ ತರುವ ಸವಾಲು ನನ್ನ ಮುಂದಿದೆ ಎಂದ ಸಿಎಂ ನಾಯಕತ್ವ ಬದಲಾವಣೆ ವಿಚಾರದ ಪ್ರಶ್ನೆಗೆ ಕೈಮುಗಿದು ತೆರಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...