ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗಾರ ಜಯಗಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕ್ಷೇತ್ರದ ಮತದಾರರಿಗೆ ಧನ್ಯವಾದ ಹೇಳಿದ್ದಾರೆ. ವಿಜೇತ ಅಭ್ಯರ್ಥಿ ಶರಣು ಸಲಗಾರ ಅವರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಯಡಿಯೂರಪ್ಪ ಅವರು, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಆಶೀರ್ವದಿಸಿದ ಕ್ಷೇತ್ರದ ಎಲ್ಲಾ ಮತದಾರ ಬಂಧುಗಳಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ಕ್ಷೇತ್ರದ ಜನರ ವಿಶ್ವಾಸ ಗಳಿಸಿ ಗೆಲುವು ಸಾಧಿಸಿದ ನಮ್ಮ ಅಭ್ಯರ್ಥಿ ಶರಣು ಸಲಗಾರ ಅವರಿಗೆ ಮತ್ತು ಅಲ್ಲಿನ ನಮ್ಮ ಎಲ್ಲಾ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.