alex Certify BIG NEWS: ರಾಜ್ಯೋತ್ಸವ ಪ್ರಶಸ್ತಿ ಮೊತ್ತ 5 ಲಕ್ಷ ರೂ.ಗೆ ಏರಿಕೆ, ಸರ್ಕಾರದಿಂದಲೇ ಸಾಧಕರ ಗುರುತಿಸಿ ಗೌರವ; ಸಿಎಂ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯೋತ್ಸವ ಪ್ರಶಸ್ತಿ ಮೊತ್ತ 5 ಲಕ್ಷ ರೂ.ಗೆ ಏರಿಕೆ, ಸರ್ಕಾರದಿಂದಲೇ ಸಾಧಕರ ಗುರುತಿಸಿ ಗೌರವ; ಸಿಎಂ ಘೋಷಣೆ

ಬೆಂಗಳೂರು: ಬೆಂಗಳೂರಿನಲ್ಲಿ ಇಂದು ನಡೆದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಾಧಕರು ಮತ್ತು ಸಾಧನೆ ಮಾಡಿದ ಸಂಸ್ಥೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಮೊತ್ತವನ್ನು 1 ಲಕ್ಷ ರೂ. ನಿಂದ 5 ಲಕ್ಷ ರೂ.ಗೆ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮುಂದಿನ ವರ್ಷದಿಂದ ಪ್ರಶಸ್ತಿ ಮೊತ್ತವನ್ನು ಹೆಚ್ಚಳ ಮಾಡಲಾಗುವುದು. ರಾಜ್ಯೋತ್ಸವ ಪ್ರಶಸ್ತಿಗೆ ಇರುವ ವಯಸ್ಸಿನ ಮಿತಿಯನ್ನು ಕೂಡ ಇಳಿಕೆ ಮಾಡಲಾಗುವುದು. ಈ ಬಗ್ಗೆ ಕೋರ್ಟ್ ಗೆ ಅಫಿಡವಿಟ್ ಸಲ್ಲಿಸಲಾಗುವುದು. ರಾಜ್ಯ ಪ್ರಶಸ್ತಿ ನೀಡುವ ನಿಯಮದಲ್ಲಿ ಬದಲಾವಣೆ ತರಲಾಗುವುದು. ಪ್ರಶಸ್ತಿಗೆ ಅರ್ಜಿ ಹಾಕಬೇಕಿಲ್ಲ. ಸರ್ಕಾರದಿಂದಲೇ ಸಾಧಕರನ್ನು ಗುರುತಿಸಿ ಗೌರವಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...