ಗದಗ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಬಜರಂಗದಳ ನಿಷೇಧಿಸುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಮಾತನಾಡಿದ ಅವರು, ಬಜರಂಗದಳ ಸಾಮಾಜಿಕ, ಧಾರ್ಮಿಕವಾಗಿ ಕೆಲಸ ಮಾಡುವ ಸಂಘಟನೆಯಾಗಿದೆ. ಪಿಎಫ್ಐ ದೇಶ ವಿರೋಧಿ ಕೆಲಸ ಮಾಡಿದೆ. ಭಯೋತ್ಪಾದನೆ ಮಾಡಿದೆ. ಹೀಗಾಗಿ ಪಿಎಫ್ಐ ವಿರುದ್ಧ ಸಾಕಷ್ಟು ಕೇಸುಗಳಿವೆ. ದುಷ್ಕೃತ್ಯಗಳಿಗೆ ಪುರಾವೆಗಳಿವೆ ಎಂದರು.
ನಿಷೇಧಿತ ಪಿಎಫ್ಐ ಸಂಘಟನೆಗೆ ಬಜರಂಗದಳ ಹೋಲಿಸುವುದು ಸರಿಯಲ್ಲ. ರಾಜ್ಯ ಸರ್ಕಾರಕ್ಕೆ ಬಜರಂಗದಳ ಬ್ಯಾನ್ ಮಾಡುವ ಅಧಿಕಾರ ಇಲ್ಲ. ಬಜರಂಗದಳ ನಿಷೇಧಿಸುವ ಅಧಿಕಾರ ಇರುವುದು ಕೇಂದ್ರಕ್ಕೆ ಮಾತ್ರ ಎಂದು ಸಿಎಂ ಹೇಳಿದ್ದಾರೆ.