ಹುಬ್ಬಳ್ಳಿ: ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಂದೆ, ತಾಯಿ ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.
ಹುಬ್ಬಳ್ಳಿಯ ನಂದಿ ಬಡಾವಣೆಯಲ್ಲಿರುವ ತಂದೆ ತಾಯಿಯವರ ಸಮಾಧಿ ಸ್ಥಳಕ್ಕೆ ತೆರಳಿದ ಸಿಎಂ ಪೂಜೆ ಸಲ್ಲಿಸಿದ್ದು, ಅವರಿಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಸಾಥ್ ನೀಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಯಾರಿಗೂ ಸಿಗದ ಅವಕಾಶ ಸಿಕ್ಕಿದೆ ಎಂದು ಗೋವಿಂದ ಕಾರಜೋಳ ಹೇಳಿದ್ದಾರೆ. ಸಿಎಂಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ನಂತರ ಮಾತನಾಡಿದ ಅವರು, ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣ ಹೆಚ್ಚಿಸಿದ್ದಾರೆ. ಅವರು ನೂರು ವರ್ಷಗಳ ಕಾಲ ಆರೋಗ್ಯವಾಗಿರಲಿ ಎಂದು ಗೋವಿಂದ ಕಾರಜೋಳ ಹಾರೈಸಿದ್ದಾರೆ.