ಬೆಂಗಳೂರು: ಚುನಾವಣೆಗೆ ಸಜ್ಜಾಗುತ್ತಿರುವ ಹೊತ್ತಲ್ಲೇ ಬೇರೆ ಪಕ್ಷಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಶಾಕ್ ನೀಡಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಬಂದು ಹೋದ ಬೆನ್ನಲ್ಲೇ ಸಿಎಂ ತಂತ್ರಗಾರಿಕೆ ರೂಪಿಸಿದ್ದಾರೆ. ಬೇರೆ ಪಕ್ಷಗಳಿಂದ ಸೈಡ್ ಲೈನ್ ನಾಯಕರಿಗೆ ಮಣೆ ಹಾಕತೊಡಗಿದ್ದಾರೆ. ಪ್ರಬಲ ಜಾತಿ ನಾಯಕರನ್ನು ಹೈಜಾಕ್ ಮಾಡತೊಡಗಿದ್ದಾರೆ. ಮಂಡ್ಯದಲ್ಲಿ ಇಬ್ಬರು ನಾಯಕರು ಕೇಸರಿ ತೆಕ್ಕೆಗೆ ಬಂದಿದ್ದಾರೆ. ಮಾಜಿ ಸಚಿವ ಜಯರಾಮ್ ಪುತ್ರ ಅಶೋಕ ಜಯರಾಮ್, ಮಾಜಿ ಐ.ಆರ್.ಎಸ್. ಅಧಿಕಾರಿ ಲಕ್ಷ್ಮಿ ಅಶ್ವಿನ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಕೋಲಾರದಲ್ಲಿ ಕುರುಬ ಸಮುದಾಯದ ನಾಯಕನಿಗೆ ಸಿಎಂ ಗಾಳ ಹಾಕಿದ್ದಾರೆ. ಮಾಜಿ ಸಚಿವ ವರ್ತೂರು ಪ್ರಕಾಶ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಆಡಳಿತಕ್ಕೆ ಚುರುಕು ಮುಟ್ಟಿಸುವ ಜೊತೆಗೆ ಚುನಾವಣೆಗೂ ಸಿಎಂ ಸಿದ್ಧತೆ ನಡೆಸಿದ್ದಾರೆ. ಮೊಗವೀರ ಸಮುದಾಯದ ನಾಯಕ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಪ್ರಮೋದ್ ಸೇರ್ಪಡೆಯಿಂದ ಬಿಜೆಪಿಗೆ ಆನೆಬಲ ಬಂದಂತಾಗಿದೆ.
ವಿಧಾನ ಪರಿಷತ್ ಮಾಜಿ ಸದಸ್ಯ ಸಂದೇಶ್ ನಾಗರಾಜ್, ಮಾಲೂರು ಮಾಜಿ ಶಾಸಕ ಕೆ.ಎಸ್. ಮಂಜುನಾಥಗೌಡ, ರಾಜ್ಯಸಭೆ ಮಾಜಿ ಸದಸ್ಯ ಕೆ.ಬಿ. ಕೃಷ್ಣಮೂರ್ತಿ ಸೇರಿದಂತೆ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.