alex Certify BPL ಕಾರ್ಡ್ ಹೊಂದಿದ SC, ST ಕುಟುಂಬದವರಿಗೆ ಸಿಹಿ ಸುದ್ದಿ: ಉಚಿತ ವಿದ್ಯುತ್ ಯೋಜನೆಗೆ ಇಂದು ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BPL ಕಾರ್ಡ್ ಹೊಂದಿದ SC, ST ಕುಟುಂಬದವರಿಗೆ ಸಿಹಿ ಸುದ್ದಿ: ಉಚಿತ ವಿದ್ಯುತ್ ಯೋಜನೆಗೆ ಇಂದು ಚಾಲನೆ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಟುಂಬದವರಿಗೆ ಉಚಿತ ವಿದ್ಯುತ್ ಯೋಜನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ.

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಸರ್ಕಾರದ ವರ್ಷಾಚರಣೆ, ಜನೋತ್ಸವ ಸಮಾವೇಶ ರದ್ದು ಮಾಡಲಾಗಿದೆ. ಬಡವರು ಮತ್ತು ಶೋಷಿತರಿಗೆ ಕೆಲವು ಕಾರ್ಯಕ್ರಮಗಳನ್ನು ಇಂದು ಮುಖ್ಯಮಂತ್ರಿಗಳು ಪ್ರಕಟಿಸಲಿದ್ದಾರೆ.

ಅದರಂತೆ ಬಿಪಿಎಲ್ ಕಾರ್ಡ್ ಹೊಂದಿದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬದವರಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸಲಾಗುವುದು. ಪ್ರತಿ ತಿಂಗಳು 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಿದ್ದು, ಈ ವಿನೂತನ ಯೋಜನೆಗೆ ಇಂದು ಸಿಎಂ ಚಾಲನೆ ನೀಡಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...