alex Certify ನಿರುದ್ಯೋಗಿ ಯುವತಿಯರಿಗೆ ಮಾಸಿಕ 2 ಸಾವಿರ ರೂ.: ಪ್ರತಿ ಮನೆಗೆ ಉಚಿತ ವಿದ್ಯುತ್ ಬಳಿಕ ಕಾಂಗ್ರೆಸ್ 2ನೇ ಭರವಸೆ ಇಂದು ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನಿರುದ್ಯೋಗಿ ಯುವತಿಯರಿಗೆ ಮಾಸಿಕ 2 ಸಾವಿರ ರೂ.: ಪ್ರತಿ ಮನೆಗೆ ಉಚಿತ ವಿದ್ಯುತ್ ಬಳಿಕ ಕಾಂಗ್ರೆಸ್ 2ನೇ ಭರವಸೆ ಇಂದು ಘೋಷಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ ನಲ್ಲಿ ಕುಟುಂಬ ನಿರ್ವಹಣೆಗಾಗಿ ಮಹಿಳೆಯರ ಖಾತೆಗೆ ಹಣ ನೀಡುವುದಾಗಿ ಹೇಳಿದ್ದು, ಇದಕ್ಕೆ ಟಕ್ಕರ್ ಕೊಡಲು ಕಾಂಗ್ರೆಸ್ ಮುಂದಾಗಿದೆ.

ನಿರುದ್ಯೋಗಿ ಹೆಣ್ಣುಮಕ್ಕಳಿಗೆ ಮಾಸಿಕ 2000 ರೂ. ನೀಡಲು ಕಾಂಗ್ರೆಸ್ ನಿರ್ಧರಿಸಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ ಮಾಸಿಕ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆ ಮಾಡಿರುವ ಕಾಂಗ್ರೆಸ್ ಇಂದು ಎರಡನೆಯ ಭರವಸೆಯಾಗಿ ನಿರುದ್ಯೋಗಿ ಹೆಣ್ಣು ಮಕ್ಕಳಿಗೆ ಮಾಸಿಕ 2,000 ರೂ. ನೀಡುವುದಾಗಿ ಘೋಷಣೆ ಮಾಡಲಿದೆ.

ಬೆಂಗಳೂರಿನಲ್ಲಿ ನಡೆಯಲಿರುವ ‘ನಾ ನಾಯಕಿ’ ಮಹಿಳಾ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿಯವರ ಮೂಲಕ ಇದನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. 18 ವರ್ಷ ಮೇಲ್ಪಟ್ಟ ನಿರುದ್ಯೋಗಿ ಯುವತಿಯರಿಗೆ ಮಾಸಿಕ 2000 ರೂಪಾಯಿ ಭತ್ಯೆ ನೀಡಲು ಕಾಂಗ್ರೆಸ್ ಇಂದು ಅಧಿಕೃತವಾಗಿ ಘೋಷಣೆ ಮಾಡಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...