ಬೆಳಗಾವಿ: ಸಚಿವ ಸ್ಥಾನದ ನಿರೀಕ್ಷೆಯಲ್ಲಿರುವ ಆಕಾಂಕ್ಷಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ ನೀಡಿದ್ದಾರೆ.
ರಾಜ್ಯದಲ್ಲಿ ಶೀಘ್ರವೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ದೆಹಲಿಗೆ ತೆರಳಿ ವರಿಷ್ಠರ ಭೇಟಿಯಾಗಿ ಈ ಕುರಿತು ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.
ಬೆಳಗಾವಿಯಲ್ಲಿ ಮಾತನಾಡಿದ ಸಿಎಂ, ಶೀಘ್ರವೇ ಸಚಿವಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಗಲಿದೆ. ದೆಹಲಿಗೆ ತೆರಳಿ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುತ್ತೇನೆ. ಜನಸಂಕಲ್ಪ ಯಾತ್ರೆ ಆರಂಭವಾಗಿದ್ದು, ಇದರ ನಡುವೆಯೇ ದೆಹಲಿ ಪ್ರವಾಸ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ.