
ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ, ಮಠಕ್ಕೆ ಆಡಳಿತಾಧಿಕಾರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಸಾಣೆಹಳ್ಳಿ ಸಮೀಪದ ಹೆಲಿಪ್ಯಾಡ್ ನಲ್ಲಿ ಮಾತನಾಡಿದ ಅವರು, ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಲು ಮುಖಂಡರು ಮನವಿ ಮಾಡಿದ್ದರು. ಹೀಗಾಗಿ ಕಂದಾಯ ಇಲಾಖೆಯಿಂದ ಜಿಲ್ಲಾಧಿಕಾರಿಗೆ ವರದಿ ಕೇಳಲಾಗಿದೆ. ಜಿಲ್ಲಾಧಿಕಾರಿಗಳ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಶ್ರೀಗಳು ಮಾಡಿದ್ದು ಅಕ್ಷಮ್ಯ ಅಪರಾಧ ಎಂದು ಮಾಜಿ ಸಿಎಂ ಯಡಿಯೂರಪ್ಪ ನೀಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ. ಪ್ರಕರಣ ನ್ಯಾಯಾಲಯದಲ್ಲಿದೆ. ಈಗಲೇ ಏನು ಹೇಳಲಾಗದು ಎಂದು ತಿಳಿಸಿದ್ದಾರೆ.