ಹುಬ್ಬಳ್ಳಿ: ನಮ್ಮ ಗುರಿ ಮೀರಿ ಸಾಧನೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ನಮ್ಮ ಹೊಣೆಗಾರಿಕೆ ಅರಿತು ಕೆಲಸವನ್ನು ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮುಂದಿನ ಏಪ್ರಿಲ್ ತಿಂಗಳಿನಲ್ಲಿ ನೂತನ ಶಿಕ್ಷಣ ನೀತಿ ಜಾರಿಗೊಳಿಸಲಾಗುವುದು. ಪ್ರಧಾನಿ ಮೋದಿಯವರು ನನಗೆ ಕೆಲವು ಮಾರ್ಗದರ್ಶನ ಮಾಡಿದ್ದಾರೆ. ಅವರ ಮಾರ್ಗದರ್ಶನದಲ್ಲಿ ಕೆಲವು ಕಾರ್ಯಕ್ರಮಗಳನ್ನು ಮಾಡಿದ್ದೇನೆ ಎಂದ ಅವರು, ಮೇಕೆದಾಟು ಯೋಜನೆಗೆ ಕಾಂಗ್ರೆಸ್ ಕೈಗೊಂಡಿರುವ ಪಾದಯಾತ್ರೆ ಬಗ್ಗೆ ಪ್ರತಿಕ್ರಿಯೆ ನೀಡಿ, ನಿಮ್ಮ ಸರ್ಕಾರದಲ್ಲಿ ಏಕೆ ಯೋಜನೆ ಜಾರಿ ಮಾಡಲಿಲ್ಲ ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದ್ದಾರೆ.
ಒಂದೂವರೆ ವರ್ಷ ಮೈತ್ರಿ ಸರ್ಕಾರದಲ್ಲಿ ಪಾಲುದಾರರಾಗಿದ್ದರು. ಆಗ ಯೋಜನೆಯ ಬಗ್ಗೆ ಏಕೆ ಯೋಚನೆ ಮಾಡಲಿಲ್ಲ. ಡಿಪಿಆರ್ ಮಾಡಲು ಐದು ವರ್ಷ ಸಮಯ ತೆಗೆದುಕೊಂಡರು. ಈಗ ಕೈಗೊಂಡಿರುವುದು ರಾಜಕೀಯ ಪ್ರೇರಿತ ಪಾದಯಾತ್ರೆ ಎಂದು ಬೊಮ್ಮಾಯಿ ಟೀಕಿಸಿದ್ದಾರೆ. ಮತಾಂತರ ಕಾಯ್ದೆ ಜಾರಿಗೆ ಟಾಸ್ಕ್ ಫೋರ್ಸ್ ರಚಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.