![](https://kannadadunia.com/wp-content/uploads/2021/08/Basavaraja-Bommai-800x445-1.jpg)
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ನನ್ನ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಹೋಂ ಕ್ವಾರಂಟೈನ್ ನಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಾನು ಆರೋಗ್ಯವಾಗಿದ್ದೇನೆ ಎಂದು ಅವರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.
ನಾನು ಇಂದು ಸೌಮ್ಯ ರೋಗಲಕ್ಷಣಗಳೊಂದಿಗೆ COVID-19 ಗೆ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ವರದಿ ಬಂದಿದೆ. ನನ್ನ ಆರೋಗ್ಯ ಚೆನ್ನಾಗಿದೆ, ನಾನು ಹೋಮ್ ಕ್ವಾರಂಟೈನ್‌ನಲ್ಲಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರೂ ಐಸೋಲೇಟ್ ಆಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಸಿಎಂ ತಿಳಿಸಿದ್ದಾರೆ.