ಬೆಂಗಳೂರು: ಬೆಳೆ ಹಾನಿ ಸರ್ವೇ ಮಾಹಿತಿ ಅಪ್ಲೋಡ್ ಆದ ಕೂಡಲೇ ಖಾತೆಗೆ ಹಣ ಜಮಾ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅಕಾಲಿಕ ಮಳೆಗೆ ಅನೇಕ ಬೆಳೆ ನಾಶವಾಗಿದೆ. ಬೆಳೆಹಾನಿ ಸರ್ವೆ ಮಾಹಿತಿಯನ್ನು ಆಪ್ ನಲ್ಲಿ ಅಪ್ಲೋಡ್ ಮಾಡಬೇಕು. ಮಾಹಿತಿ ಅಪ್ಲೋಡ್ ಮಾಡಲಾದ ತಕ್ಷಣವೇ ರೈತರ ಖಾತೆಗೆ ಹಣ ಜಮಾ ಆಗಬೇಕು. ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಹಣದ ಕೊರತೆಯಾದರೆ ಕೂಡಲೇ ತಿಳಿಸುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.
ಗುತ್ತಿಗೆದಾರರು ಪ್ರಧಾನಮಂತ್ರಿಗೆ ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಯಾರ ಹೆಸರನ್ನು ನಿರ್ದಿಷ್ಟವಾಗಿ ಉಲ್ಲೇಖಿಸಿಲ್ಲ. ಆದರೂ, ಕೂಡ ಪತ್ರ ಬರೆದ ಬಗ್ಗೆ ತನಿಖೆ ಮಾಡುತ್ತೇವೆ. ಟೆಂಡರ್ ಪ್ರಕ್ರಿಯೆಯಲ್ಲಿ ದೋಷವಿದ್ದರೆ ಪರಿಶೀಲನೆ ನಡೆಸುತ್ತೇವೆ. ನಮ್ಮದು ಪಾರದರ್ಶಕ ಸರ್ಕಾರ ಎಂದು ತಿಳಿಸಿದ್ದಾರೆ.