alex Certify BREAKING: ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ: ಸೈಕಲ್, ಶೂ, ಸಾಕ್ಸ್ ವಿತರಣೆ ಬಗ್ಗೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ವಿದ್ಯಾರ್ಥಿಗಳಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ: ಸೈಕಲ್, ಶೂ, ಸಾಕ್ಸ್ ವಿತರಣೆ ಬಗ್ಗೆ ಘೋಷಣೆ

ಮೈಸೂರು: ಈ ವರ್ಷವೇ ಶಾಲಾ ಮಕ್ಕಳಿಗೆ ಸೈಕಲ್, ಶೂ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಿಎಂ, ಸ್ವಲ್ಪ ವಿಳಂಬವಾಗಿದ್ದು, ಮಕ್ಕಳಿಗೆ ಸೈಕಲ್ ಮತ್ತು ಶೂ ವಿತರಿಸಲಾಗುವುದು. ಈ ವಿಚಾರದ ಕುರಿತಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

ಸರ್ಕಾರಿ ಶಾಲೆಯ 8ನೇ ತರಗತಿ ಮಕ್ಕಳಿಗೆ ಸೈಕಲ್, ಒಂದರಿಂದ ಹತ್ತನೇ ತರಗತಿಯ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸಲಾಗುತ್ತಿತ್ತು. 2019 -20 ರಿಂದ ಸೈಕಲ್ ವಿತರಣೆ ಸ್ಥಗಿತಗೊಂಡಿದೆ. ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ಶಾಲೆ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸಿಲ್ಲ. ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಅನುದಾನ ಮೀಸಲಿಡದ ಹಿನ್ನೆಲೆಯಲ್ಲಿ ಈ ಬಾರಿಯೂ ಸರ್ಕಾರಿ ಶಾಲೆಯ ಮಕ್ಕಳಿಗೆ ಸೈಕಲ್, ಶೂ, ಸಾಕ್ಸ್ ವಿತರಿಸುವುದಿಲ್ಲ ಎನ್ನಲಾಗಿತ್ತು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ವಿಪಕ್ಷಗಳ ನಾಯಕರು ಕೂಡ ಟೀಕಿಸಿದ್ದರು. ಈಗ ಸಿಎಂ ಈ ವರ್ಷವೇ ಸೈಕಲ್, ಶೂ ವಿತರಿಸುವುದಾಗಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...