alex Certify ಕನ್ನಡ ಕಾನೂನು ನಿಘಂಟು ರಚನೆಗೆ ಸಿಎಂ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡ ಕಾನೂನು ನಿಘಂಟು ರಚನೆಗೆ ಸಿಎಂ ಸೂಚನೆ

ಬೆಂಗಳೂರು: ಕನ್ನಡ ಕಾನೂನು ನಿಘಂಟು ರಚನೆಗೆ ಕನ್ನಡ ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ನ್ಯಾಯಾಂಗ ಕ್ಷೇತ್ರದಲ್ಲಿ ಕನ್ನಡ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು,

ಕನ್ನಡದಲ್ಲಿ ತೀರ್ಪು ಕೊಡುವುದು ಅಷ್ಟು ಸುಲಭವಲ್ಲ, ಕನ್ನಡದಲ್ಲಿ ತೀರ್ಪು ನೀಡಿ ನೀವೆಲ್ಲ ಸಾಧನೆ ಮಾಡಿದ್ದೀರಿ. ಆಧೀನ ನ್ಯಾಯಾಲಯದಲ್ಲಿ ಕನ್ನಡದಲ್ಲಿ ತೀರ್ಪು ನೀಡಲಾಗುತ್ತಿದೆ. ಹೈಕೋರ್ಟ್ ನಲ್ಲೂ ಕನ್ನಡದಲ್ಲಿ ತೀರ್ಪು ನೀಡಬೇಕಿದೆ. ಹೈಕೋರ್ಟ್ ನಲ್ಲಿ ಕನ್ನಡದಲ್ಲಿ ತೀರ್ಪು ನೀಡುವುದು ಕಷ್ಟ. ಆದರೆ, ಸಾಧ್ಯವಿದೆ. ಹೀಗಾಗಿ ಕನ್ನಡದ ಕಾನೂನು ನಿಘಂಟು ರಚನೆಯಾಗಬೇಕು. ತಜ್ಞರ ತಂಡದಿಂದ ಕನ್ನಡ ಕಾನೂನು ನಿಘಂಟು ರಚಿಸಬೇಕು. ಈ ನಿಟ್ಟಿನಲ್ಲಿ  ಅಗತ್ಯಕ್ರಮ ಕೈಗೊಳ್ಳಬೇಕೆಂದು ಸಿಎಂ ಹೇಳಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರ ವಿಶೇಷವಾದ ಕಾರ್ಯಕ್ರಮ ರೂಪಿಸಿದೆ. ಕನ್ನಡವನ್ನು ಉಳಿಸುವ ಬೆಳೆಸುವ ಜವಾಬ್ದಾರಿ ಪ್ರಾಧಿಕಾರಕ್ಕಿದೆ. ಕೊರೋನಾದಿಂದ ಕಳೆದ ಎರಡು ವರ್ಷ ಪ್ರಶಸ್ತಿ ನೀಡಲು ಸಾಧ್ಯವಾಗಿರಲಿಲ್ಲ. ಬದುಕಿನ ಎಲ್ಲಾ ಹಂತದಲ್ಲಿ ಕನ್ನಡ ಇರಬೇಕೆಂಬುದು ನಮ್ಮ ಬಯಕೆಯಾಗಿದೆ ಎಂದರು.

ಆಡಳಿತದಲ್ಲಿ ಕನ್ನಡ ಇರಬೇಕು ಎಂಬುದಕ್ಕೆ ದೊಡ್ಡ ಚಳವಳಿ ನಡೆದಿದೆ. ಶಿಕ್ಷಣದಲ್ಲಿ ಕನ್ನಡದ ಬಗ್ಗೆ ಅನೇಕ ಕಾನೂನು ಸುತ್ತೋಲೆ ಹೊರಡಿಸಿದ್ದೇವೆ. ಶಿಕ್ಷಣ ಆಯ್ಕೆಯಲ್ಲಿ ಐಚ್ಚಿಕ ವಿಷಯದಲ್ಲಿ ಸ್ವಾತಂತ್ರ್ಯವಿರಬೇಕೆಂಬ ಆದೇಶವಿದೆ. ಸುಪ್ರೀಂಕೋರ್ಟ್ ಆದೇಶದಿಂದ ಕೆಲವು ನಿಯಮ ಜಾರಿ ಸಾಧ್ಯವಾಗಿಲ್ಲ. ಕನ್ನಡ ನಾಡಿನಲ್ಲಿ ಕನ್ನಡ ಭಾಷೆ ಕಾನೂನಾತ್ಮಕ ಜಾರಿಗೆ ರಾಜ್ಯ ಸರ್ಕಾರ ಸಕಲ ಪ್ರಯತ್ನ ಮಾಡುತ್ತಿದೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...