
ಬೆಂಗಳೂರು: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ ಆಗಿ ಒಂದು ವರ್ಷ ಪೂರ್ಣಗೊಂಡಿದ್ದು, ವರ್ಷಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಜನೋತ್ಸವ ಸಮಾವೇಶವನ್ನು ರದ್ದುಗೊಳಿಸಲಾಗಿದೆ.
ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 12.30 ಕ್ಕೆ ತುರ್ತು ಸುದ್ದಿಗೋಷ್ಠಿ ನಡೆಸಿ ಈ ವಿಷಯ ಪ್ರಕಟಿಸಿದ್ದಾರೆ. ಪ್ರವೀಣ್ ಹತ್ಯೆ ನನಗೆ ನೋವು ಹಾಗೂ ಸಂಕಟ ತಂದಿದ್ದು, ಮನಸ್ಸಿಗೆ ತುಂಬಾ ಘಾಸಿಯಾಗಿರುವುದರಿಂದ ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಜನೋತ್ಸವ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ಸರ್ಕಾರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ವರ್ಷಾಚರಣೆಯನ್ನು ರದ್ದುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಸಂಭ್ರಮಾಚರಣೆ ಸರಿಯಲ್ಲವೆಂದು ನಿರ್ಧಾರ ಕೈಗೊಳ್ಳಲಾಗಿದೆ. ಬಡವರು ಹಾಗೂ ಶೋಷಿತರಿಗೆ ಗುರುವಾರ ಬೆಳಿಗ್ಗೆ ಸುದ್ದಿಗೋಷ್ಠಿಯಲ್ಲಿ ಕೆಲವು ಯೋಜನೆಗಳನ್ನು ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.