ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೆರಳುತ್ತಿದ್ದ ಹೆಲಿಕಾಪ್ಟರ್ ಚಿತ್ರದುರ್ಗದಲ್ಲಿ ಲ್ಯಾಂಡಿಂಗ್ ಆಗಿದೆ.
ಮುಖ್ಯಮಂತ್ರಿಗಳು ಶಿವಮೊಗ್ಗ ಜಿಲ್ಲೆಯ ಕಾರ್ಯಕ್ರಮ ಮುಗಿಸಿ ತೆರಳುವಾಗ ಚಿತ್ರದುರ್ಗದ ಎಸ್‌ಜೆಎಂ ಶಾಲಾ ಮೈದಾನದಲ್ಲಿ ಸಿಎಂ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗಿದೆ. ಕತ್ತಲು ಆವರಿಸಿದ್ದರಿಂದ ಮುಖ್ಯಮಂತ್ರಿ ಬೊಮ್ಮಾಯಿ ತೆರಳುತ್ತಿದ್ದ ಕ್ಯಾಪ್ಟರ್ ಲ್ಯಾಂಡಿಂಗ್ ಆಗಿದೆ.
ಚಿತ್ರದುರ್ಗದಿಂದ ಬೆಂಗಳೂರಿಗೆ ರಸ್ತೆ ಮಾರ್ಗವಾಗಿ ಮುಖ್ಯಮಂತ್ರಿಗಳು ಪ್ರಯಾಣ ಬೆಳೆಸಿದ್ದಾರೆ. ಅವರಿಗೆ ಸಚಿವರಾದ ಆರಗ ಜ್ಞಾನೇಂದ್ರ, ಡಾ.ಕೆ. ಸುಧಾಕರ್ ಮತ್ತು ಬಿ.ಸಿ. ನಾಗೇಶ್ ಸಾಥ್ ನೀಡಿದ್ದಾರೆ.