ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು 18 ಜಿಲ್ಲೆಗಳ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.
ಲಸಿಕಾಕರಣ ಪ್ರಗತಿ ಪರಿಶೀಲನಾ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದು, ಎಲ್ಲ ಜಿಲ್ಲೆಗಳಲ್ಲಿ ಮೊದಲ ಡೋಸ್ ಲಸಿಕೆಯನ್ನು ಶೇಕಡ 100 ರಷ್ಟು ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಎರಡನೇ ಡೋಸ್ ಲಸಿಕೆ ನೀಡಿಕೆ ವೇಗವನ್ನು ಹೆಚ್ಚಳ ಮಾಡಬೇಕೆಂದು ತಿಳಿಸಿದ್ದು, ಜಿಲ್ಲೆಗಳಲ್ಲಿ ಒಪಿಡಿ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಸೋಂಕು ತೀವ್ರವಾದಾಗ ವ್ಯವಸ್ಥೆ ಕಲ್ಪಿಸಲು ಆಗುವುದಿಲ್ಲ. ಆಸ್ಪತ್ರೆಗಳ ಮೂಲ ಸೌಕರ್ಯದ ಬಗ್ಗೆ ಈಗಿನಿಂದಲೇ ಗಮನಹರಿಸಿ. ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂದು ಹೇಳಿದ್ದಾರೆ.