ಬೆಂಗಳೂರು: ಇನ್ನು ಮುಂದೆ ಮೊಬೈಲ್ ಆಪ್ ನಲ್ಲೇ ಕನ್ನಡ ಸಾಹಿತ್ಯ ಪರಿಷತ್ತು ಸದಸ್ಯತ್ವ ಲಭ್ಯವಾಗಲಿದೆ. ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಆಪ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದ್ದಾರೆ.
ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಮೊಬೈಲ್ ಆಪ್ ‘ಕನ್ನಡ ಸಾಹಿತ್ಯ ಪರಿಷತ್ತು’ ಲೋಕಾರ್ಪಣೆ ಮಾಡಿದರು. ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ ಆಗಿಸುವಲ್ಲಿ ಈ ಆಪ್ ಪ್ರಮುಖ ಪಾತ್ರ ವಹಿಸಲಿದೆ ಎಂದು ಹೇಳಲಾಗಿದೆ.
ಈ ಸಂದರ್ಭದಲ್ಲಿ ಸಚಿವರಾದ ವಿ. ಸೋಮಣ್ಣ, ಡಾ.ಸಿ.ಎನ್. ಅಶ್ವತ್ಥನಾರಾಯಣ್, ಶಿವರಾಮ ಹೆಬ್ಬಾರ್, ಶಾಸಕ ನಿನ್ನಹರು ಓಲೆಕಾರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮಹೇಶ್ ಜೋಶಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮೊದಲಾದವರು ಇದ್ದರು.