alex Certify ನೇಕಾರರ ಮಕ್ಕಳಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ: 15 ದಿನದೊಳಗೆ ವಿದ್ಯಾನಿಧಿ ಹಣ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೇಕಾರರ ಮಕ್ಕಳಿಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ: 15 ದಿನದೊಳಗೆ ವಿದ್ಯಾನಿಧಿ ಹಣ ಬಿಡುಗಡೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇಕಾರ್ ಸಮ್ಮಾನ್ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ನೇಕಾರರ 46,000 ಕುಟುಂಬಗಳ ವಿದ್ಯಾರ್ಥಿಗಳಿಗೆ 15 ದಿನಗಳೊಳಗೆ ವಿದ್ಯಾನಿಧಿ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ.

ನೇಕಾರರ ಕಸುಬು ಉನ್ನತೀಕರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಕೈಮಗ್ಗ ನೇಕಾರರಿಗೆ ತಲಾ 5,000 ರೂ.ನಂತೆ 46,864 ಫಲಾನುಭವಿಗಳಿಗೆ 23.43 ಕೋಟಿ ರೂ. ಆರ್ಥಿಕ ನೆರವು ನೀಡಲಾಗಿದ್ದು, ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಜಮೆ ಮಾಡಲಾಗಿದೆ. ನೇಕಾರರ ಉಳಿದ ಬೇಡಿಕೆಗಳ ಈಡೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...