alex Certify ಹತ್ಯೆಯಾದ ಪ್ರವೀಣ್ ನೆಟ್ಟಾರು ಕುಟುಂಬದವರಿಗೆ ಸಾಂತ್ವನ ಹೇಳಿದ ಸಿಎಂ 25 ಲಕ್ಷ ರೂ. ಚೆಕ್ ವಿತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹತ್ಯೆಯಾದ ಪ್ರವೀಣ್ ನೆಟ್ಟಾರು ಕುಟುಂಬದವರಿಗೆ ಸಾಂತ್ವನ ಹೇಳಿದ ಸಿಎಂ 25 ಲಕ್ಷ ರೂ. ಚೆಕ್ ವಿತರಣೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ನೆಟ್ಟಾರು ಗ್ರಾಮಕ್ಕೆ ಭೇಟಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಯುವ ಮುಖಂಡ ಪ್ರವೀಣ್ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಇದೇ ಸಂದರ್ಭದಲ್ಲಿ ಪ್ರವೀಣ್ ಅವರ ಕುಟುಂಬದವರಿಗೆ 25 ಲಕ್ಷ ರೂ ಪರಿಹಾರದ ಚೆಕ್ ನೀಡಲಾಗಿದೆ.

ಪ್ರವೀಣ್ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿ ಚೆಕ್ ವಿತರಿಸಿದ ನಂತರ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಕುಟುಂಬದವರಿಗೆ ಸಾಂತ್ವನ ಹೇಳಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 25 ಲಕ್ಷ ರೂ. ಚೆಕ್ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ಗೃಹ ಸಚಿವ ಆರಗ ಜ್ಞಾನೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ. ಮೊದಲಾದವರಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...