ಕಲಬುರಗಿ: ರೈತರ ಮಕ್ಕಳಿಗೆ ವೈದ್ಯಕೀಯ, ಇಂಜಿನಿಯರಿಂಗ್ ಶಿಕ್ಷಣ ಕಲಿಯಲು ವಿದ್ಯಾರ್ಥಿ ವೇತನ ನೀಡುವಂತೆ ರೈತರ ಜಮೀನುಗಳಲ್ಲಿ ಕೆಲಸ ಮಾಡುವ ಕೂಲಿಕಾರ್ಮಿಕರ ಮಕ್ಕಳು, ಮತ್ತು ಕಮ್ಮಾರ, ಬಡಿಗ ಇತರೆ ಕುಶಲಕರ್ಮಿಗಳ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೌಲಭ್ಯ ಕಲ್ಪಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ಕಲಬುರಗಿಯ ಅಡಕಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅಶೋಕ್, ಸ್ನೇಹಿತರ ಜಮೀನುಗಳಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರು, ಕಮ್ಮಾರರು, ಬಡಿಗ ಇತರೆ ಕುಶಲಕರ್ಮಿಗಳ ಮಕ್ಕಳು ಶೈಕ್ಷಣಿಕವಾಗಿ ಮುಂದೆ ಬರಲು ವಿದ್ಯಾರ್ಥಿವೇತನ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ ಎಂದು ತಿಳಿಸಿದರು.
ಸಮಾರಂಭದ ವೇದಿಕೆಯಲ್ಲಿದ್ದಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಚಿವ ಅಶೋಕ್ ಅವರಿಗೆ ಕರೆ ಮಾಡಿ ಚರ್ಚೆ ನಡೆಸಿದರು. ನಂತರ ಸಚಿವರು ಮಾಹಿತಿ ನೀಡಿ, ಮುಖ್ಯಮಂತ್ರಿ ಅವರು ಕರೆ ಮಾಡಿ ಒಂದಷ್ಟು ಹೊಸ ಯೋಜನೆಗಳನ್ನು ಪ್ರಕಟಿಸುವಂತೆ ಹೇಳಿದ್ದಾರೆ. ಕುಶಲಕರ್ಮಿಗಳ ಸ್ವಯಂ ಉದ್ಯೋಗಕ್ಕಾಗಿ 50 ಸಾವಿರ ರೂಪಾಯಿ ಉದ್ಯೋಗ ನಿಧಿ ನೆರವು ನೀಡಲಾಗುವುದು ಎಂದು ಸಿಎಂ ಹೇಳಿದ್ದಾರೆ. ಕುಶಲಕರ್ಮಿಗಳ ಮಕ್ಕಳ ಕಲಿಕೆಗೂ ವಿದ್ಯಾರ್ಥಿವೇತನ ಸೌಲಭ್ಯ ನೀಡಲಾಗುವುದು ಎಂದರು.