ಮಂಗಳೂರು: ರಾಜ್ಯದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಸಂಬಂಧಿಸಿದಂತೆ ಸಮಿತಿಯಿಂದ ರೋಹಿತ್ ಚಕ್ರತೀರ್ಥ ಅವರನ್ನು ವಜಾಗೊಳಿಸುವಂತೆ ಆಗ್ರಹ ಕೇಳಿಬಂದಿದೆ. ಈ ಕುರಿತಂತೆ ಮಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಈಗಾಗಲೇ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದು, ನಾಳೆ ಶಿಕ್ಷಣ ಸಚಿವರು ವರದಿ ನೀಡಲಿದ್ದಾರೆ. ವರದಿ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.
ಮಂಗಳೂರಿನಲ್ಲಿ ಮಾತನಾಡಿದ ಸಿಎಂ, ಪಠ್ಯ ಪರಿಷ್ಕರಣೆ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರನ್ನು ವಜಾಗೊಳಿಸುವಂತೆ ಆಗ್ರಹ ಕೇಳಿ ಬರುತ್ತಿರುವ ಕುರಿತಾಗಿ ಪ್ರತಿಕ್ರಿಯೆ ನೀಡಿದ್ದು, ಈಗಾಗಲೇ ಇದರ ಬಗ್ಗೆ ಶಿಕ್ಷಣ ಸಚಿವರಿಗೆ ಸೂಚನೆ ನೀಡಿದ್ದೇನೆ. ಶಿಕ್ಷಣ ಸಚಿವರು ನಾಳೆ ವರದಿ ಕೊಡುವುದಾಗಿ ಹೇಳಿದ್ದಾರೆ. ವರದಿ ಸತ್ಯಾಂಶಗಳನ್ನು ಸಂಪೂರ್ಣವಾಗಿ ವಿವರಿಸುವುದಾಗಿ ತಿಳಿಸಿದ್ದಾರೆ. ವರದಿಯ ಬಳಿಕ ಏನು ಕ್ರಮ ಕೈಗೊಳ್ಳಬೇಕೆಂದು ನಿರ್ಧರಿಸುತ್ತೇವೆ ಎಂದು ಹೇಳಿದ್ದಾರೆ.