alex Certify ನ. 11 ರಿಂದ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ದೊಡ್ಡರಂಗೇಗೌಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನ. 11 ರಿಂದ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ದೊಡ್ಡರಂಗೇಗೌಡ

ಬೆಂಗಳೂರು: ಹಾವೇರಿಯಲ್ಲಿ ನವೆಂಬರ್ 11 ರಿಂದ 3 ದಿನಗಳ ಕಾಲ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲ ತೀರ್ಮಾನಿಸಲಾಗಿದೆ. ಹಿರಿಯ ಕವಿ ಡಾ. ದೊಡ್ಡರಂಗೇಗೌಡ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಕೃಷ್ಣರಾಜ ಪರಿಷತ್ ಮಂದಿರ ಹಾಗೂ ಆವರಣದ ನವೀಕೃತ ಕಟ್ಟಡ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಸಾಹಿತ್ಯ ಸಮ್ಮೇಳನಕ್ಕೆ ಕೆಲಸದ ದಿನಗಳನ್ನು ಬಳಸಿಕೊಳ್ಳದೆ ನಿಗದಿತ ಮೂರು ರಜೆಯ ದಿನಗಳಲ್ಲಿ ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು. ಹಿರಿಯ ಕವಿ ದೊಡ್ಡರಂಗೇಗೌಡ ಸರ್ವಾಧ್ಯಕ್ಷತೆಯಲ್ಲಿ ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...