ಬೆಳಗಾವಿ(ಸುವರ್ಣಸೌಧ): ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳು ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ವಸತಿ ನಿಲಯಗಳ ಕೊರತೆ ನೀಗಿಸಲು ಪ್ರಾದೇಶಿಕ ಕೇಂದ್ರಗಳಲ್ಲಿ ಹೆಚ್ಚುವರಿ ಸೌಲಭ್ಯ ಕಲ್ಪಿಸಲಾಗುವುದು. ಇದಕ್ಕಾಗಿ ಮುಂದಿನ ಬಜೆಟ್ ನಲ್ಲಿ ವಿಶೇಷ ಅನುದಾನ ಒದಗಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಎಲ್. ನಾಗೇಂದ್ರ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ, ಗ್ರಾಮೀಣ ಪ್ರದೇಶದಲ್ಲಿ ಹಾಸ್ಟೆಲ್ ಗಳ ಕೊರತೆಯಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆ ಉಂಟಾಗುತ್ತಿದೆ. ಹೀಗಾಗಿ ಪ್ರಾದೇಶಿಕ ಕೇಂದ್ರಗಳ ವಸತಿ ನಿಲಯಗಳಲ್ಲಿ ಸೌಲಭ್ಯ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದರು.