
ಬೆಂಗಳೂರು: ಮೊದಲ ಹಂತದಲ್ಲಿ ಸೋಮವಾರದಿಂದ ಹತ್ತನೇ ತರಗತಿವರೆಗೆ ಶಾಲೆ ಆರಂಭ ಮಾಡಲಾಗುವುದು. ನಂತರ ಎರಡನೇ ಹಂತದಲ್ಲಿ ಪಿಯುಸಿ ಸೇರಿ ಉಳಿದ ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನಾಳೆ ಸಂಜೆ ಎಲ್ಲ ಜಿಲ್ಲಾಧಿಕಾರಿಗಳು ಡಿಡಿಪಿಐ ಪೊಲೀಸ್ ಅಧೀಕ್ಷಕ ರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಗುವುದು. ಜಿಲ್ಲೆಗಳಲ್ಲಿರುವ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆದು ನಿರ್ದೇಶನ ನೀಡಲಾಗುತ್ತದೆ. ಸೋಮವಾರದಿಂದ ಹತ್ತನೇ ತರಗತಿಯವರೆಗೆ ಶಾಲೆಗಳು ಆರಂಭವಾಗಲಿವೆ. ಮೊದಲ ಹಂತದಲ್ಲಿ 10ನೇ ತರಗತಿವರೆಗೆ ಶಾಲೆಗಳನ್ನು ಆರಂಭಿಸಲಿದ್ದು, ಎರಡನೇ ಹಂತದಲ್ಲಿ ಪಿಯುಸಿ ತರಗತಿ ಆರಂಭಿಸುವ ಬಗ್ಗೆ ತೀರ್ಮಾನಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.