ಬೆಂಗಳೂರು: ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿ ಸಿಎಂ ಬಸವರಾಜ್ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಚರ್ಚೆ ನಡೆಸಿದರು.
ಬೆಂಗಳೂರಿನ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸಕ್ಕೆ ತೆರಳಿದ ಸಿಎಂ ಬೊಮ್ಮಾಯಿ, ಮಾಜಿ ಪ್ರಧಾನಿ ಕಾಲಿಗೆ ನಮಸ್ಕರಿಸಿ ಆಶಿರ್ವಾದ ಪಡೆದರು. ಈ ವೇಳೆ ದೇವೇಗೌಡರು ನೂತನ ಸಿಎಂಗೆ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನ ಮಾಡಿದರು.
BIG NEWS: ಮಳೆ, ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 5 ಲಕ್ಷ ಪರಿಹಾರ; ಸಿಎಂ ಘೋಷಣೆ
ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಹೆಚ್.ಡಿ.ರೇವಣ್ಣ ಸಾಥ್ ನೀಡಿದರು.
ದೇವೇಗೌಡರ ಭೇಟಿ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಜನತಾಪರಿವಾರದಲ್ಲಿದ್ದಾಗಿನ ಒಡನಾಟ, ಹಳೆ ನೆನಪುಗಳನ್ನು ಮೆಲುಕು ಹಾಕಿದೆವು. ಸಿಕ್ಕಿರುವ ಅವಕಾಶ ಸಮರ್ಥವಾಗಿ ಬಳಸಿಕೊಂಡು, ರಾಜ್ಯಕ್ಕೆ ಉತ್ತಮವಾಗಿ ಆಡಳಿತ ನೀಡುವಂತೆ ಮಾರ್ಗದರ್ಶನ ನೀಡಿದರು ಎಂದು ಹೇಳಿದರು.