alex Certify BIG NEWS: ಭಾಷೆ ಸದೃಢವಾಗಿದ್ದರೆ ಮಾತ್ರ ರಾಜ್ಯ ಶಕ್ತಿಶಾಲಿಯಾಗಿರುತ್ತದೆ; ಕನ್ನಡ ಭಾಷೆ ಶ್ರೀಮಂತವಾಗಿ ಹೆಮ್ಮರವಾಗಿ ಬೆಳೆಸುವುದೇ ನಮ್ಮ ಉದ್ದೇಶ; ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಭಾಷೆ ಸದೃಢವಾಗಿದ್ದರೆ ಮಾತ್ರ ರಾಜ್ಯ ಶಕ್ತಿಶಾಲಿಯಾಗಿರುತ್ತದೆ; ಕನ್ನಡ ಭಾಷೆ ಶ್ರೀಮಂತವಾಗಿ ಹೆಮ್ಮರವಾಗಿ ಬೆಳೆಸುವುದೇ ನಮ್ಮ ಉದ್ದೇಶ; ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯಾದ್ಯಂತ ಇಂದು 66ನೇ ಕನ್ನಡ ರಾಜ್ಯೋತ್ಸವ ಸಂಭ್ರಮ. ರಾಜ್ಯದಲ್ಲಿ ಪ್ರತಿಯೊಬ್ಬರೂ ಪ್ರತಿದಿನ ಕನ್ನಡದಲ್ಲಿ ಮಾತನಾಡಬೇಕು. ಕನ್ನಡವನ್ನು ಹೆಮ್ಮರವಾಗಿ ಬೆಳೆಸಬೇಕು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಕರೆ ನೀಡಿದ್ದಾರೆ.

ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭುವನೇಶ್ವರಿ ತಾಯಿಗೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡ ನಮ್ಮೆಲ್ಲರನ್ನೂ ಒಗ್ಗೂಡಿಸಿದೆ. ಕನ್ನಡ ಎಂಬ ತಾಯಿ ದೇವರನ್ನು ನಾವು ರಕ್ಷಿಸಬೇಕು ಎಂದರು.

ಯಾವುದೇ ರಾಜ್ಯದ ಭಾಷೆ ಸಧೃಢವಾಗಿದ್ದರೆ ಆ ರಾಜ್ಯ ಶಕ್ತಿಶಾಲಿಯಾಗಿರುತ್ತದೆ. ಭಾರತದ ಅತ್ಯಂತ ಪುರಾತನವಾದ ಭಾಷೆ ಕನ್ನಡ. ಕನ್ನಡ ಭಾಷೆಗೆ ತನ್ನದೇ ಆದ ಅಂತರ್ಗತ ಶಕ್ತಿ ಇದೆ. ಎಲ್ಲಾ ರಂಗಗಳಲ್ಲೂ ಕನ್ನಡಕ್ಕೆ ಸ್ಥಾನ ನೀಡಬೇಕು. ಕನ್ನಡವನ್ನು ರಾಜ್ಯದ ಗಡಿಯೊಳಗೆ ಸೀಮಿತಗೊಳಿಸುವುದಲ್ಲ, ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಮಾಡಬೇಕು ಎಂದು ತೀರ್ಮಾನ ಕೈಗೊಳ್ಳಲಾಗಿದೆ ಎಂದರು.

ರಾಜ್ಯದ ಯಾವುದೇ ಪ್ರದೇಶ ಹಿಂದುಳಿಯಲು ಬಿಡುವುದಿಲ್ಲ. ಕಿತ್ತೂರು ಕರ್ನಾಟಕದ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ. ಕನ್ನಡ ಭಾಷೆ ಶ್ರೀಮಂತಗೊಳಿಸುವುದೇ ನಮ್ಮ ಉದ್ದೇಶ ಎಂದು ಹೇಳಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...