ಹುಬ್ಬಳ್ಳಿ: ದೇವಾಲಯಗಳನ್ನು ಕಾನೂನು ಕಟ್ಟುಪಾಡುಗಳಿಂದ ಮುಕ್ತಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಮಂದಿರಗಳ ವಿಚಾರ ಬಂದಾಗ ಸರ್ಕಾರ ಒಂದು ಕಾನೂನು ತಂದಿದೆ. ಇದು ನಮ್ಮ ಬದ್ಧತೆಯಾಗಿದ್ದು, ತಕ್ಷಣ ಸ್ಪಂದಿಸುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಹೇಳಿದ್ದಾರೆ.
ದೇವಾಲಯದ ಹಣ ದೇವಾಲಯಗಳ ಅಭಿವೃದ್ಧಿಗೆ ಮಾತ್ರ ಬಳಕೆಯಾಗಬೇಕು. ನಮ್ಮ ಅಜೆಂಡಾ ಸ್ಪಷ್ಟವಾಗಿದೆ. ಅದನ್ನು ಜಾರಿಗೆ ತರುತ್ತೇವೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಆಂಜನೇಯನ ಕ್ಷೇತ್ರವನ್ನು ಅಭಿವೃದ್ಧಿಪಡಿಸುತ್ತೇವೆ. ಕ್ಷೇತ್ರವನ್ನು ಅಭಿವೃದ್ಧಿಪಡಿಸಿ ಶ್ರೀರಾಮಚಂದ್ರ ಮಂದಿರ ಆಗಬೇಕು. ಅದನ್ನು ಪ್ರಧಾನಿ ಮೋದಿ ಅವರ ಕೈಯಲ್ಲಿ ಉದ್ಘಾಟಿಸುತ್ತೇವೆ. ಅಂಜನಾದ್ರಿ ಬೆಟ್ಟ ಶ್ರೇಷ್ಟ ಸ್ಥಳವಾಗಿ ಮಾಡುವುದು ನಮ್ಮ ಆದ್ಯತೆಯಾಗಿದ್ದು, ನಮ್ಮ ಸರ್ಕಾರ ಅಧಿಕಾರದಲ್ಲಿರುವಾಗಲೇ ಅದನ್ನು ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಮತಾಂತರ ತಡೆಗೆ ಸ್ಪೆಷಲ್ ಟಾಸ್ಕ್ ಫೋರ್ಸ್ ರಚನೆ ಮಾಡಲಾಗುವುದು. ಬೇರೆ ಸಮುದಾಯದ ಪ್ರಾರ್ಥನಾ ಸ್ಥಳಕ್ಕೆ ಸ್ವತಂತ್ರವಿರುವ ರೀತಿಯಲ್ಲಿಯೇ ಹಿಂದೂ ದೇವಾಲಯಗಳನ್ನು ಸ್ವತಂತ್ರ ಮಾಡುತ್ತೇವೆ. ಹಿಂದೂ ದೇಗುಲಗಳನ್ನು ಕಾನೂನಿನಿಂದ ಮುಕ್ತ ಮಾಡುತ್ತೇವೆ. ಇವುಗಳಿಗೆ ಸರ್ಕಾರದ ನಿಯಂತ್ರಣ ಬಿಟ್ಟರೆ ಬೇರೆ ಏನೂ ಇರುವುದಿಲ್ಲ. ಬಜೆಟ್ ಅಧಿವೇಶನ ದೊಳಗೆ ಇದಕ್ಕೆ ಕಾನೂನು ಸ್ವರೂಪ ನೀಡುತ್ತೇವೆ ಎಂದು ಬಿಜೆಪಿ ಕಾರ್ಯಕಾರಿಣಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ.