ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ಸಂದರ್ಭದಲ್ಲಿ ತಪ್ಪುಗಳಾಗಿದ್ದಲ್ಲಿ ಅದನ್ನು ಸರಿಪಡಿಸಲು ಸರ್ಕಾರ ಮುಕ್ತ ಮನಸ್ಸು ಹೊಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯಪುಸ್ತಕದಲ್ಲಿನ ತಪ್ಪುಗಳನ್ನು ಸರಿಪಡಿಸಲು ನಾವು ಸಿದ್ಧವಿದ್ದೇವೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತಿರ್ಥ ನೇತೃತ್ವದ ಸಮಿತಿ ಪರಿಷ್ಕರಿಸಿದ ಎಲ್ಲಾ ಪಠ್ಯಗಳನ್ನು ವಾಪಸ್ ಪಡೆಯಬೇಕೆಂದು ಹೇಳಿದ್ದಾರೆ. ಪಠ್ಯ ಪರಿಷ್ಕರಣೆ ಸಮಿತಿ ವಿಸರ್ಜನೆ ಮೊದಲ ಸಲ ಆಗುತ್ತಿಲ್ಲ. ಸಿದ್ದರಾಮಯ್ಯ ಎಲ್ಲದರಲ್ಲಿಯೂ ರಾಜಕೀಯ ಮಾಡುತ್ತಿದ್ದಾರೆ. ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಆರೋಪಿಸಿದರು.
ನಾವು ಪಠ್ಯಪುಸ್ತಕಗಳಲ್ಲಿ ಆಗಿರುವ ತಪ್ಪುಗಳನ್ನು ಸರಿಪಡಿಸಲು ಸಿದ್ಧವಿದ್ದೇವೆ ಎಂದು ಸಿಎಂ ತಿಳಿಸಿದ್ದಾರೆ.
ಇನ್ನು ಶಿಕ್ಷಣ ಇಲಾಖೆ ಪಠ್ಯ ಪರಿಷ್ಕರಣೆ ವಿವಾದಕ್ಕೆ ತೆರೆ ಎಳೆಯುವ ಉದ್ದೇಶದಿಂದ ಬರಗೂರು ರಾಮಚಂದ್ರಪ್ಪ, ಮುಡಂಬಡಿತ್ತಾಯ, ರೋಹಿತ್ ಚಕ್ರತೀರ್ಥ ಸಮಿತಿ ಪರಿಷ್ಕರಿಸಿದ ಪಠ್ಯಕ್ರಮಗಳನ್ನು ವೆಬ್ಸೈಟ್ ನಲ್ಲಿ ಪ್ರಕಟಿಸಿ ಜನರಿಂದ ಆಕ್ಷೇಪಣೆ ಆಹ್ವಾನಿಸಲು ನಿರ್ಧರಿಸಿದೆ ಎಂದು ಹೇಳಲಾಗಿದೆ.