alex Certify ಬಡವರಿಗೆ ನಿವೇಶನ, ಮನೆ: ಸಿಎಂ ಬೊಮ್ಮಾಯಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಡವರಿಗೆ ನಿವೇಶನ, ಮನೆ: ಸಿಎಂ ಬೊಮ್ಮಾಯಿ ಗುಡ್ ನ್ಯೂಸ್

ಬೆಂಗಳೂರು: ಬಡವರಿಗೆ ನಿವೇಶನ ಮನೆ ನೀಡಲು ಅನುಕೂಲವಾಗುವಂತೆ ನಿಯಮಾವಳಿ ಬದಲಾವಣೆ ಮಾಡಿ ಕಾನೂನು ಸರಳೀಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬೆಂಗಳೂರಿನ ಒಂದು ಲಕ್ಷ ಬಹುಮಹಡಿ ವಸತಿ ಯೋಜನೆಯಡಿ ಆಯ್ಕೆಯಾದ ಅರ್ಹ ಫಲಾನುಭವಿಗಳಿಗೆ ಸಾಂಕೇತಿಕವಾಗಿ ಹಂಚಿಕೆ ಪತ್ರ ವಿತರಿಸಿ ಅವರು ಮಾತನಾಡಿದರು.

ವಸತಿ ಸೌಲಭ್ಯ ಎಲ್ಲರ ಮೂಲಭೂತ ಹಕ್ಕಾಗಿದ್ದು, ಬಡವರಿಗೆ ಮನೆ ನಿವೇಶನಗಳನ್ನು ನ್ಯಾಯಸಮ್ಮತವಾಗಿ ಒದಗಿಸುವ ನಿಟ್ಟಿನಲ್ಲಿ ಕಾನೂನು ಸರಳೀಕರಣ ಅವಶ್ಯಕತೆಯಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲ ಬಡವರಿಗೂ ವಸತಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ 4 ಲಕ್ಷ ಮನೆಗಳು, ನಗರ ಪ್ರದೇಶದಲ್ಲಿ ಒಂದು ಲಕ್ಷ ಮನೆಗಳು ಮತ್ತು ಕೊಳಗೇರಿಗಳಲ್ಲಿ 97,000 ಮನೆಗಳ ನಿರ್ಮಾಣ ಕಾರ್ಯ ನಡೆದಿದೆ. ಬೆಂಗಳೂರಿನಲ್ಲಿ 46 ಸಾವಿರ ಮನೆಗಳನ್ನು ಫಲಾನುಭವಿಗಳಿಗೆ ಹಂಚಬೇಕಿದೆ. 64000 ಮನೆಗಳಿಗೂ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ನಡೆಸುವಂತೆ ಸೂಚನೆ ನೀಡಿದರು.

ವಸತಿ ಸಚಿವ ವಿ. ಸೋಮಣ್ಣ, ಇದುವರೆಗೆ 46,499 ಮನೆಗಳು ಪೂರ್ಣಗೊಂಡಿದ್ದು, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...