ಬೆಂಗಳೂರು: ಬೆಂಗಳೂರು ನಗರವನ್ನು ಯೋಜನಾಬದ್ಧ ನಗರವಾಗಿ ಸರಿಪಡಿಸುವ ಪ್ಲಾನ್ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮನೆ ಇದ್ದು ಹಕ್ಕುಪತ್ರ ಇಲ್ಲದವರಿಗೆ ಹಕ್ಕುಪತ್ರಗಳನ್ನು ಕೊಡುತ್ತೇವೆ ಎಂದು ಹೇಳಿದ್ದಾರೆ. ಇದರ ಬಗ್ಗೆ ನಾನು ದೆಹಲಿಯಲ್ಲಿ ಕೂಡ ಮಾತನಾಡಿದ್ದೇನೆ. ಶೀಘ್ರವೇ ಹಕ್ಕು ಪತ್ರ ಕೊಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಗೋವಿಂದರಾಜ ನಗರ ವಿಧಾನಸಭಾ ಕ್ಷೇತ್ರದ ಅಗ್ರಹಾರ ದಾಸರಹಳ್ಳಿ ವಾರ್ಡ್ ನಲ್ಲಿ ಬಿಬಿಎಂಪಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸಲಾಗುವುದು. ನಾಗರಿಕರಿಗೆ ಎಲ್ಲ ಅಗತ್ಯ ಮೂಲ ಸೌಕರ್ಯ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಪ್ರತ್ಯೇಕ, ಸ್ವತಂತ್ರ ಆರೋಗ್ಯ ವ್ಯವಸ್ಥೆಯನ್ನು ಕೂಡ ಬೆಂಗಳೂರಿಗೆ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.