ಬೆಂಗಳೂರು: ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗಿದೆ.
ಬಿಜೆಪಿ ಶಾಸಕಾಂಗ ಸಭೆಯಲ್ಲಿ ವರಿಷ್ಠರ ಅಭಿಪ್ರಾಯವನ್ನು ವೀಕ್ಷಕರು ತಿಳಿಸಿದ್ದು, ಬಿ.ಎಸ್. ಯಡಿಯೂರಪ್ಪ ಕೂಡ ಬಸವರಾಜ ಬೊಮ್ಮಾಯಿ ಅವರ ಆಯ್ಕೆಗೆ ಸಹಮತ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಬಸವರಾಜ್ ಬೊಮ್ಮಾಯಿ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಬಸವರಾಜ ಬೊಮ್ಮಾಯಿ ಅವರ ಆಯ್ಕೆಗೆ ಬಿಜೆಪಿ ವರಿಷ್ಠರು ಸಂಘಪರಿವಾರದ ನಾಯಕರು ಮತ್ತು ಸಿಎಂ ಯಡಿಯೂರಪ್ಪ ಕೂಡ ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಶಾಸಕಾಂಗ ಸಭೆಯಲ್ಲಿ ಸರ್ವಸಮ್ಮತ ನಾಯಕನಾಗಿ ಬಸವರಾಜ ಬೊಮ್ಮಾಯಿ ಹೆಸರನ್ನು ಫೈನಲ್ ಮಾಡಲಾಗಿದೆ. ಕೆಲವೇ ಕ್ಷಣಗಳಲ್ಲಿ ಅಧಿಕೃತ ಘೋಷಣೆ ಮಾಡಲಾಗುವುದು.
ದೇವೇಗೌಡರು ರಾಜ್ಯದ ಮುಖ್ಯಮಂತ್ರಿಯಾಗಿದ್ದು, ಅವರ ಪುತ್ರ ಹೆಚ್.ಡಿ. ಕುಮಾರಸ್ವಾಮಿ ಕೂಡ ಸಿಎಂ ಆಗಿದ್ದಾರೆ. ಅಂತೆಯೇ ಎಸ್.ಆರ್. ಬೊಮ್ಮಾಯಿ ಅವರ ಪುತ್ರ ಬಸವರಾಜ ಬೊಮ್ಮಾಯಿ ಕೂಡ ಸಿಎಂ ಆಗಲಿದ್ದು, ರಾಜ್ಯದಲ್ಲಿ ಮಾಜಿ ಸಿಎಂಗಳ ಪುತ್ರರಿಬ್ಬರು ಸಿಎಂ ಸ್ಥಾನ ಅಲಂಕರಿಸದಂತಾಗಲಿದೆ.