alex Certify BIG BREAKING: ನೂತನ ಸಿಎಂ ಬಸವರಾಜ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನೂತನ ಸಿಎಂ ಬಸವರಾಜ ಬೊಮ್ಮಾಯಿ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಬಿಜೆಪಿ ಶಾಸಕಾಂಗ ಸಭೆಯಲ್ಲಿ ಸರ್ವಾನುಮತದಿಂದ ನನ್ನನ್ನು ನಾಯಕನಾಗಿ ಆಯ್ಕೆ ಮಾಡಿದ ಎಲ್ಲರಿಗೂ ಕೃತಜ್ಞತೆಗಳು. ಇದಕ್ಕೆ ಕಾರಣರಾದ ಎಲ್ಲರಿಗೂ ಹೃದಯಸ್ಪರ್ಶಿ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ರಾಜ್ಯದ ನೂತನ ಸಿಎಂ(ನಿಯೋಜಿತ) ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪಕ್ಷದ ನಾಯಕರಾದ ನರೇಂದ್ರ ಮೋದಿ, ಅಮಿತ್ ಶಾ, ಯಡಿಯೂರಪ್ಪ ಸೇರಿದಂತೆ ಇದಕ್ಕೆ ಕಾರಣರಾದ ಶಾಸಕರು, ಪಕ್ಷ ಪದಾಧಿಕಾರಿಗಳು, ಎಲ್ಲರಿಗೂ ವಂದನೆಗಳು. ಜನರಿಗಾಗಿ ಜನಪರ ಆಡಳಿತ ನೀಡಲು ಶ್ರಮಿಸುತ್ತೇನೆ. ಕರ್ನಾಟಕವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಹಗಲಿರುಳು ಶ್ರಮಿಸುತ್ತೇನೆ, ಕೋವಿಡ್ ನಿಂದಾಗಿ ಸಂಕಷ್ಟದಲ್ಲಿರುವ ಜನರಿಗೆ ಸ್ಪಂದಿಸುವುದು ಆದ್ಯತೆ, ರಾಜ್ಯದ ಹಿರಿಯರ ಆಶಿರ್ವಾದವೇ ಬಲ. ಯಾವುದೇ ಷರತ್ತು ವಿಧಿಸಿಲ್ಲ. ಬಜೆಟ್ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಪ್ರಯತ್ನಿಸುತ್ತೇನೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...