ಬೆಂಗಳೂರು: ಬೆಂಗಳೂರಿನಲ್ಲಿ 75 ನೇ ಸ್ವಾತಂತ್ರೋತ್ಸವದ ಸಂಭ್ರಮಕ್ಕೆ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದೆ.
ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಲಿದ್ದು, ಬಳಿಕ ತೆರೆದ ಜೀಪ್ ನಲ್ಲಿ ಪರಿವೀಕ್ಷಣೆ ನಡೆಸಲಿದ್ದಾರೆ. ಬಳಿಕ ಧ್ವಜಾರೋಹಣ ನೆರವೇರಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ 1000 ಜನ ಭಾಗಿಯಾಗಲು ಅವಕಾಶ ನೀಡಲಾಗಿದೆ. ಕೊರೊನಾದಿಂದ ಗುಣಮುಖರಾದ 25 ಜನರಿಗೆ ಆಹ್ವಾನ ನೀಡಿದ್ದು, ಭದ್ರತೆಗೆ 1500 ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.