alex Certify ಬೆಂಗಳೂರು ಉಸ್ತುವಾರಿಗಾಗಿ ಸಚಿವರ ಮುಸುಕಿನ ಗುದ್ದಾಟ: ಹೀಗಿದೆ ಸಿಎಂ ಪ್ರತಿಕ್ರಿಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಉಸ್ತುವಾರಿಗಾಗಿ ಸಚಿವರ ಮುಸುಕಿನ ಗುದ್ದಾಟ: ಹೀಗಿದೆ ಸಿಎಂ ಪ್ರತಿಕ್ರಿಯೆ

ಬೆಂಗಳೂರು: ಬೆಂಗಳೂರು ಜಿಲ್ಲಾ ಉಸ್ತುವಾರಿಗಾಗಿ ಸಚಿವರು ಮುಸುಕಿನ ಗುದ್ದಾಟ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಎಲ್ಲರ ಜೊತೆ ಚರ್ಚಿಸಿ ಸೌಹಾರ್ದಯುತವಾಗಿ ಬಗೆಹರಿಸುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೆ ಯಾವ ಜಿಲ್ಲೆ ನೀಡಬೇಕು ಎಂಬುದರ ಬಗ್ಗೆ ಸಚಿವರ ಜೊತೆ ಸೌಹಾರ್ದಯುತವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಯಾವುದೇ ರೀತಿಯ ತೊಂದರೆಯಾಗದಂತೆ ನಿರ್ಧಾರ ಮಾಡುತ್ತೇನೆ. ಬೆಂಗಳೂರು ಬಹಳ ಮಹತ್ವದ್ದಾಗಿದೆ. ಈ ಬಗ್ಗೆ ಎಲ್ಲರೊಂದಿಗೂ ಚರ್ಚೆ ನಡೆಸಲಾಗುವುದು. ಚರ್ಚೆ ನಡೆಸಿ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸುತ್ತೇನೆ ಎಂದು ಬೊಮ್ಮಾಯಿ ತಿಳಿಸಿದ್ದಾರೆ.

ನನ್ನ ದೆಹಲಿ ಪ್ರವಾಸ ಯಶಸ್ವಿಯಾಗಿದೆ. ದೆಹಲಿಯಲ್ಲಿ ಹಲವು ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಗಿದೆ. ರಾಜ್ಯಕ್ಕೆ ಕಲ್ಲಿದ್ದಲು ಪೂರೈಸುವಂತೆ ಮನವಿ ಮಾಡಲಾಗಿದೆ. ಕೋವಿಡ್ ಲಸಿಕೆಯನ್ನು ಹೆಚ್ಚು ಪೂರೈಕೆ ಮಾಡಲು ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...