alex Certify ಮನೆ, ಕಟ್ಟಡ ನಿರ್ಮಿಸುವವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ: ಹೊಸ ಮರಳು ನೀತಿ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆ, ಕಟ್ಟಡ ನಿರ್ಮಿಸುವವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿ ಸುದ್ದಿ: ಹೊಸ ಮರಳು ನೀತಿ ಜಾರಿ

ಹಾವೇರಿ: ಮನೆ, ಕಟ್ಟಡ ನಿರ್ಮಿಸುವವರಿಗೆ ಮರಳು ಹೊಂದಿಸುವುದೇ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ದುಬಾರಿ ದರ ಸೇರಿ ಅನೇಕ ಸಮಸ್ಯೆ ಎದುರಿಸುವಂತಾಗಿದೆ. ಹೀಗೆ ಮರಳಿನ ಸಮಸ್ಯೆಯನ್ನು ನಿವಾರಿಸಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಕ್ರಮಕೈಗೊಂಡಿದೆ. ರಾಜ್ಯದಲ್ಲಿ ಹೊಸ ಮರಳು ನೀತಿ ಶೀಘ್ರದಲ್ಲೇ ಜಾರಿಯಾಗಲಿದೆ.

ಹಾವೇರಿ ಜಿಲ್ಲೆಯ ಶಿಗ್ಗಾವಿ ಮತ್ತು ಸವಣೂರು ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಅನೇಕ ಮರಳು ನೀತಿಗಳಿಂದ ಗೊಂದಲವಾಗಿದೆ. ಹೀಗಾಗಿ ಹೊಸ ಮರಳು ನೀತಿ ಜಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಕರಡು ಸಿದ್ಧಪಡಿಸಲು ಸೂಚನೆ ನೀಡಲಾಗಿದೆ. ಶೀಘ್ರದಲ್ಲಿಯೇ ಹೊಸ ಮರಳು ನೀತಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.

ಹಿಂದಿನ ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ್ ಅವರು ನೂತನ ಮರಳು ನೀತಿಯನ್ನು ಸಿದ್ಧಪಡಿಸಿದ್ದು, ಅದನ್ನು ಕೂಡ ಪರಿಶೀಲನೆ ಮಾಡಲಾಗುತ್ತಿದೆ. ಆಶ್ರಯ ಯೋಜನೆ ಫಲಾನುಭವಿಗಳು, ಜನ ಸಾಮಾನ್ಯರು ಹಾಗೂ ಸರ್ಕಾರಿ ಯೋಜನೆಗಳಿಗೆ ಸುಲಭವಾಗಿ ಮರಳು ಸಿಗುವಂತೆ ಮಾಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...