ಹಾವೇರಿ: ಮರಳಿನ ಸಮಸ್ಯೆ ನಿವಾರಿಸಿ ಜನಸಾಮಾನ್ಯರಿಗೆ ಅನುಕೂಲ ಮಾಡಿಕೊಡಲು ಸರ್ಕಾರ ಕ್ರಮಕೈಗೊಂಡಿದ್ದು, ರಾಜ್ಯದಲ್ಲಿ ಹೊಸ ಮರಳು ನೀತಿ ಶೀಘ್ರದಲ್ಲೇ ಜಾರಿಯಾಗಲಿದೆ.
ಶಿಗ್ಗಾಂವಿ ಮತ್ತು ಸವಣೂರು ತಾಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಶಂಕುಸ್ಥಾಪನೆ ಸಮಾರಂಭದಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ ಅನೇಕ ಮರಳು ನೀತಿಗಳಿಂದ ಗೊಂದಲವಾಗಿದೆ. ಹೀಗಾಗಿ ಹೊಸ ಮರಳು ನೀತಿ ಜಾರಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಕರಡು ಸಿದ್ಧಪಡಿಸಲು ಸೂಚನೆ ನೀಡಲಾಗಿದೆ. ಶೀಘ್ರದಲ್ಲಿಯೇ ಹೊಸ ಮರಳು ನೀತಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಹಿಂದಿನ ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ್ ಅವರು ನೂತನ ಮರಳು ನೀತಿಯನ್ನು ಸಿದ್ಧಪಡಿಸಿದ್ದು, ಅದನ್ನು ಕೂಡ ಪರಿಶೀಲನೆ ಮಾಡಲಾಗುತ್ತಿದೆ. ಆಶ್ರಯ ಯೋಜನೆ ಫಲಾನುಭವಿಗಳು, ಜನ ಸಾಮಾನ್ಯರು ಹಾಗೂ ಸರ್ಕಾರಿ ಯೋಜನೆಗಳಿಗೆ ಸುಲಭವಾಗಿ ಮರಳು ಸಿಗುವಂತೆ ಮಾಡಲಾಗುವುದು ಎಂದು ಹೇಳಿದ್ದಾರೆ.