
ಬೆಂಗಳೂರು: ರಾಜ್ಯದ ಗ್ರಾಮೀಣ ಜನರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಗ್ರಾಮ ಪಂಚಾಯಿತಿಗೆ ಒಂದು ನಾಗರಿಕ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಜನರಿಗೆ ಅಗತ್ಯವಿರುವ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ನಾಗರಿಕ ಸೇವಾ ಕೇಂದ್ರ ಆರಂಭಿಸುವಂತೆ ಇ -ಆಡಳಿತ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇ ಆಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಅತ್ಯಂತ ಅಗತ್ಯವಿರುವ ಸರ್ಕಾರಿ ಸೇವೆ ಒದಗಿಸಲು ನಾಗರಿಕ ಸೇವಾ ಕೇಂದ್ರ ಆರಂಭಿಸಬೇಕು ಎಂದು ಹೇಳಿದ್ದಾರೆ.