ಬೆಂಗಳೂರು: ಪ್ರಸಕ್ತ ವರ್ಷ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಈ ವರ್ಷ 5 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಖಾಲಿ ಹುದ್ದೆಗಳ ನೇಮಕಾತಿ ಬಹಳ ದಿನಗಳಿಂದ ಬಾಕಿ ಉಳಿದಿದ್ದು, ಇದರ ಬಗ್ಗೆ ಶಿಕ್ಷಣ ಸಚಿವರು ಗಮನಕ್ಕೆ ತಂದಿದ್ದಾರೆ. ಈ ವರ್ಷವೇ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.