ಬೆಂಗಳೂರು: ಖಾತೆ ಹಂಚಿಕೆ ಬಗ್ಗೆ ಅಸಮಾಧಾನಗೊಂಡಿದ್ದ ಆನಂದ್ ಸಿಂಗ್ ಮನವೊಲಿಸುವಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯಶಸ್ವಿಯಾಗಿದ್ದಾರೆ.
ಸಚಿವ ಆರ್. ಅಶೋಕ್ ಮತ್ತು ಶಾಸಕ ರಾಜುಗೌಡ ಅವರೊಂದಿಗೆ ಸಮಾಲೋಚನೆ ನಡೆಸಿದ ಸಿಎಂ, ಆನಂದ್ ಸಿಂಗ್ ಅವರ ಮನವೊಲಿಸಿದ್ದಾರೆ. ರೇಸ್ ಕೋರ್ಸ್ ರಸ್ತೆಯ ಅಪಾರ್ಟ್ಮೆಂಟ್ ನಲ್ಲಿ ಸಚಿವ ಆರ್. ಅಶೋಕ್ ಮತ್ತು ಶಾಸಕ ರಾಜುಗೌಡ ಉಪಸ್ಥಿತಿಯಲ್ಲಿ ಚರ್ಚೆ ನಡೆಸಲಾಗಿದೆ.
ರಾಜಕಾರಣದಲ್ಲಿ ಕೆಲವು ಸಲ ನೋವುಗಳು ಆಗುತ್ತವೆ. ಅವರ ಭಾವನೆಗಳನ್ನು ವ್ಯಕ್ತಪಡಿಸಿದ್ದು, ಸದ್ಯದ ಪರಿಸ್ಥಿತಿಯನ್ನು ಅವರಿಗೆ ವಿವರಿಸಿದ್ದೇನೆ. ವರಿಷ್ಠರೊಂದಿಗೆ ಚರ್ಚಿಸುತ್ತೇನೆ ಎಂದು ಅವರಿಗೆ ತಿಳಿಸಿದ್ದು, ನನ್ನ ಭರವಸೆಗೆ ಆನಂದ್ ಸಿಂಗ್ ಒಪ್ಪಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ. ಆಗಸ್ಟ್ 15 ರಂದು ಹೊಸಪೇಟೆಯಲ್ಲಿ ಆನಂದ್ ಸಿಂಗ್ ಧ್ವಜಾರೋಹಣ ನೆರವೇರಿಸಲಿದ್ದಾರೆ ಎಂದು ಆರ್. ಅಶೋಕ್ ಮತ್ತು ರಾಜು ಗೌಡ ತಿಳಿಸಿದ್ದಾರೆ.