alex Certify ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲೇ ಪರಿಶಿಷ್ಟ ಪಂಗಡ ಸಮುದಾಯದವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲೇ ಪರಿಶಿಷ್ಟ ಪಂಗಡ ಸಮುದಾಯದವರಿಗೆ ಗುಡ್ ನ್ಯೂಸ್

ಬೆಂಗಳೂರು: ಇಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದಾರೆ.

ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಈ ತೀರ್ಮಾನಗಳನ್ನು ಕೈಗೊಂಡ ಬಗ್ಗೆ ಸಿಎಂ ಬೊಮ್ಮಾಯಿ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ಎಲ್ಲ ಸಚಿವರು ತಮಗೆ ನಿಗದಿಪಡಿಸಿದ ಜಿಲ್ಲೆಗಳಿಗೆ ಭೇಟಿ ನೀಡಿ ಕೋವಿಡ್ ಮತ್ತು ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಲು ತೀರ್ಮಾನಿಸಲಾಯಿತು. ಅವರು ಆ ಜಿಲ್ಲೆಗಳಿಗೆ ಭೇಟಿ ನೀಡಿ, ಕೋವಿಡ್ ಸ್ಥಿತಿಗತಿ ಹಾಗೂ ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿ, ಹೆಚ್ಚಿನ ಪರಿಹಾರ ಕ್ರಮಗಳ ಅಗತ್ಯವಿದ್ದರೆ ವರದಿ ಸಲ್ಲಿಸುವಂತೆ ಸಿಎಂ ತಿಳಿಸಿದ್ದಾರೆ.

ಕೋವಿಡ್ ಟಾಸ್ಕ್ ಫೋರ್ಸ್ ಪುನಾರಚನೆ ಮಾಡಲು ತೀರ್ಮಾನಿಸಲಾಗಿದೆ.

ಪರಿಶಿಷ್ಟ ಪಂಗಡ ಸಮುದಾಯದ ಬಹುದಿನಗಳ ಬೇಡಿಕೆಯಂತೆ ಎಸ್.ಟಿ.ಪಿ. ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪೂರಕವಾಗಿ ಪ್ರತ್ಯೇಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವಾಲಯ ಸ್ಥಾಪನೆಗೆ ತೀರ್ಮಾನಿಸಲಾಗಿದೆ.

ಆಯವ್ಯಯದಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿಗಳ ಮೇಲ್ವಿಚಾರಣೆಯಲ್ಲಿ ಮಹಿಳೆಯರ ರಕ್ಷಣೆ ಮತ್ತು ಸಬಲೀಕರಣ ಯೋಜನೆಗಳ ಅನುಷ್ಠಾನಕ್ಕೆ ತೀರ್ಮಾನ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...