alex Certify ಫೆ. 17 ರಂದು ರಾಜ್ಯ ಬಜೆಟ್ ಮಂಡನೆ: ಭರ್ಜರಿ ಕೊಡುಗೆ ಘೋಷಣೆ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫೆ. 17 ರಂದು ರಾಜ್ಯ ಬಜೆಟ್ ಮಂಡನೆ: ಭರ್ಜರಿ ಕೊಡುಗೆ ಘೋಷಣೆ ಸಾಧ್ಯತೆ

ಬೆಂಗಳೂರು: ಫೆಬ್ರವರಿ 17 ರಂದು ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ. ಈ ಬಜೆಟ್ ಪ್ರಶಕ್ತ ವಿಧಾನಸಭೆಯ ಕೊನೆಯ ಬಜೆಟ್ ಆಗಿದೆ. ಚುನಾವಣೆ ಸಮೀಪದಲ್ಲಿರುವುದರಿಂದ ಎಲ್ಲಾ ವರ್ಗಗಳಿಗೆ ಕೊಡುಗೆ ನೀಡುವ ನಿರೀಕ್ಷೆ ಇದೆ. ಫೆಬ್ರವರಿ 10ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ.

ಇಂದಿನಿಂದ ಮುಖ್ಯಮಂತ್ರಿಗಳು ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆ ಆರಂಭಿಸಲಿದ್ದಾರೆ. ಇಲಾಖೆಗಳ ಬೇಡಿಕೆಯ ಬಗ್ಗೆ ಚರ್ಚಿಸಿ ಮನವಿ ಸ್ವೀಕರಿಸಲಿದ್ದಾರೆ. ಇಂದು ಮಧ್ಯಾಹ್ನದಿಂದ ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ, ಉನ್ನತ ಶಿಕ್ಷಣ, ಐಟಿ –ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರು, ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...