ಮೈಸೂರು: ಕಾಂಗ್ರೆಸ್ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿಯ ಬಗ್ಗೆ ಚರ್ಚೆ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವರು ಅಭಿಮಾನದಿಂದ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಮೈಸೂರಿನ ಸುತ್ತೂರು ಮಠದಲ್ಲಿ ಮಾಜಿ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ.
ಯಾರೂ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ಮಾತನಾಡದಂತೆ ಹೈಕಮಾಂಡ್ ಸೂಚನೆ ನೀಡಿದೆ. ಯಾರೋ ಹೇಳಿದ ವಿಚಾರಕ್ಕೆ ಹೆಚ್ಚು ಬೆಲೆ ಕೊಡಬೇಕಿಲ್ಲ. ಕಾಂಗ್ರೆಸ್ ಇತಿಹಾಸದಲ್ಲಿಯೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿಲ್ಲ. ಚುನಾವಣೆಗೆ ಮುಂಚಿತವಾಗಿ ಸಿಎಂ ಅಭ್ಯರ್ಥಿ ಹೆಸರನ್ನು ಕಾಂಗ್ರೆಸ್ ಹೇಳಿಲ್ಲ ಎಂದು ಎಂ.ಬಿ. ಪಾಟೀಲ್ ತಿಳಿಸಿದ್ದು, ಹೀಗಾಗಿ ಮುಖ್ಯಮಂತ್ರಿ ಯಾರಾಗಬೇಕೆಂಬ ಚರ್ಚೆ ಅಪ್ರಸ್ತುತವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.