ಬೆಂಗಳೂರು : ಶಾಲಾ ಮಕ್ಕಳಿಗೆ ಹಾಲು ವಿತರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ಕ್ಷೀರಭಾಗ್ಯ ದಶಮಾನೋತ್ಸವ ಕಾರ್ಯಕ್ರಮ ಆಚರಿಸಿದರು.
ಕ್ಷೀರಭಾಗ್ಯ ಯೋಜನೆ ಜಾರಿಯಾಗಿ 10 ವರ್ಷ ಹಿನ್ನೆಲೆಯಲ್ಲಿ ಮಧುಗಿರಿಯಲ್ಲಿ.ನಡೆಯುತ್ತಿರುವ ಕ್ಷೀರಭಾಗ್ಯ ದಶಮಾನೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲೆಯ 10 ಮಕ್ಕಳಿಗೆ ಗ್ಲಾಸ್ ನಲ್ಲಿ ಹಾಲು ನೀಡಿದರು. ಈ ಮೂಲಕ ವಿಭಿನ್ನವಾಗಿ ಕಾರ್ಯಕ್ರಮ ಆಚರಣೆ ಮಾಡಲಾಯಿತು. ಸಿಎಂ ನೀಡಿದ ಹಾಲು ಕುಡಿದ ಮಕ್ಕಳು ಕೂಡ ಸಂತಸ ಪಟ್ಟರು.
ನಂತರ ಮಾತನಾಡಿದ ಸಿಎಂ ಕಳೆದ 10 ವರ್ಷಗಳ ಹಿಂದೆ ಮೊದಲ ಬಾರಿಗೆ ನಾನು ಮುಖ್ಯಮಂತ್ರಿಯಾಗಿದ್ದಾಗ 2012 ರ ಆಗಸ್ಟ್ 1 ರಂದು ಶಾಲಾ ಮಕ್ಕಳ ಅಪೌಷ್ಠಿಕತೆ ನಿವಾರಣೆಯ ಉದ್ದೇಶದಿಂದ ಕ್ಷೀರಭಾಗ್ಯ ಯೋಜನೆಯನ್ನು ಜಾರಿಗೆ ತರಲಾಯಿತು. ಈಗ ಈ ಯೋಜನೆ 10 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿರುವುದರಿಂದ ದಶಮಾನೋತ್ಸವವನ್ನು ಆಚರಿಸಲಾಗುತ್ತಿದೆ ಎಂದರು ರಾಜ್ಯದಲ್ಲಿ ಕ್ಷೀರಭಾಗ್ಯ ಯೋಜನೆ ಜಾರಿಯಾಗಿ ಹತ್ತು ವರ್ಷ ತುಂಬಿದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ತುಮಕೂರಿಗೆ ಆಗಮಿಸಿದ್ದಾರೆ. ಇದೇ ವೇಳೆ ಅವರು 145 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಕೂಡ ಚಾಲನೆ ನೀಡಿದರು.