ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲವೆಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದ್ದಾರೆ.
ನಾನು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲ, ಬೃಹತ್ ಕೈಗಾರಿಕೆ ಸಚಿವನಾಗಿ ಕೆಲಸ ಮಾಡುತ್ತಿದ್ದೇನೆ. ಹೈಕಮಾಂಡ್ ಏನು ಹೇಳುತ್ತದೆಯೋ ಅದನ್ನು ಕೇಳಬೇಕಾಗುತ್ತದೆ ಎಂದು ಸಿಎಂ ಭೇಟಿ ಬಳಿಕ ಎಂ.ಬಿ. ಪಾಟೀಲ್ ಹೇಳಿದ್ದಾರೆ.