ಬೆಂಗಳೂರು : ಬೆಂಗಳೂರಿನ ಅಷ್ಟಪಥ ಸಿಗ್ನಲ್ ಕಾರಿಡಾರ್ ಗೆ ಇಂದು ಸಿಎಂ ಸಿದ್ದರಾಮಯ್ಯ, ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ ನೀಡಲಿದ್ದಾರೆ.
ಈ ಕಾರಿಡಾರ್ ಗಾಂಧಿನಗರ, ಮೆಜೆಸ್ಟಿಕ್, ಬೆಂಗಳೂರು ನಗರ ರೈಲ್ವೆ ನಿಲ್ದಾಣ, ಮಲ್ಲೇಶ್ವರ, ರಾಜಾಜಿನಗರ, ವಿಜಯನಗರ, ಬಸವೇಶ್ವರನಗರ ಹಾಗೂ ಮಾಗಡಿ ರಸ್ತೆ ಹೀಗೆ ಬೆಂಗಳೂರು ನಗರ, ಹೊರ ರಾಜ್ಯ ಮತ್ತು ಹೊರ ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸಲಿದೆ.ಇದೇ ವೇಳೆ ಬೆಂಗಳೂರು ನಗರದ ಹೃದಯ ಭಾಗದಲ್ಲಿರುವ ಸೆಂಟ್ರಲ್ ಬಸ್ ನಿಲ್ದಾಣದ ಸಮೀಪ ನಿರ್ಮಿಸಿರುವ ರಾಜೀವ್ ಗಾಂಧಿ ಅವರ ಕಂಚಿನ ಪ್ರತಿಮೆ ಅನಾವರಣಗೊಳ್ಳಲಿದೆ.
ಓಕಳಿಪುರ ಜಂಕ್ಷನ್ನಲ್ಲಿ ಕಳೆದ 2013-14ರಲ್ಲಿ ಎಂಟು ಲೈನ್ನ ಸಿಗ್ನಲ್ ಫ್ರೀ ಕಾರಿಡಾರ್ ನಿರ್ಮಾಣ ಕಾಮಗಾರಿಯನ್ನು ಬಿಬಿಎಂಪಿ ಆರಂಭಿಸಿತ್ತು. ಈ ಜಂಕ್ಷನ್ನಲ್ಲಿ ಒಟ್ಟು ನಾಲ್ಕು ರಸ್ತೆಗಳು ಹಾದು ಹೋಗುತ್ತಿದ್ದು, ಮುಖ್ಯವಾಗಿ ರಾಜಾಜಿನಗರ ಹಾಗೂ ಮಲ್ಲೇಶ್ವರ ಕಡೆಗೆ ಸಂಪರ್ಕ ಕಲ್ಪಿಸಲಿದೆ.