ʼಭಾರತ ವಿಕಾಸ ಸಂಗಮ ಸಂಸ್ಥೆʼ ಭಾರತೀಯ ಸಂಸ್ಕೃತಿ ಉತ್ಸವ ಆಯೋಜಿಸಿದ್ದು, ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಲಿದ್ದಾರೆಂದು ಹೇಳಲಾಗಿತ್ತು.
ಆದರೆ ಇದಕ್ಕೆ ಕೆಲವರಿಂದ ವಿರೋಧ ವ್ಯಕ್ತವಾಗಿದ್ದು, ಇದು ರಾಷ್ಟ್ರೀಯ ಸ್ವಯಂ ಸೇವಕ ಸಂಘದವರ ಕಾರ್ಯಕ್ರಮ ಎಂದು ಹೇಳಿದ್ದರು. ಇದೀಗ ಸಿದ್ದರಾಮಯ್ಯ ಈ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತಂತೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿರುವ ಅವರು, ಭಾರತ ವಿಕಾಸ ಸಂಗಮ ಸಂಸ್ಥೆಯವರು ಆಯೋಜಿಸಿರುವ ಭಾರತೀಯ ಸಂಸ್ಕೃತಿ ಉತ್ಸವ ಉದ್ಘಾಟನೆಯ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಮುದ್ರಣವಾಗಿರುವದನ್ನು ಗಮನಿಸಿದ್ದೇನೆ.