ಬೆಂಗಳೂರು : ಇಂದು ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದು, ಯುವನಿಧಿಗೆ ಯಾವುದೇ ಅನುದಾನ ಘೋಷಣೆ ಮಾಡಿಲ್ಲ. ಈ ಹಿನ್ನೆಲೆ ಸದ್ಯಕ್ಕೆ ಯೋಜನೆ ಜಾರಿ ಅನುಮಾನ ಎನ್ನಲಾಗಿದೆ.
ಹೌದು, ಇಂದು ಬಜೆಟ್ ಮಂಡನೆಯಲ್ಲಿ ಸಿಎಂ ಸಿದ್ದರಾಮಯ್ಯ ಯುವ ನಿಧಿ ಜಾರಿಗೆ ಯಾವುದೇ ಅನುದಾನ ಘೋಷಿಸಿಲ್ಲ. ಯುವ ನಿಧಿ ಯೋಜನೆಗೆ ಸಂಪನ್ಮೂಲ ಸಂಗ್ರಹಿಸಲು ಮತ್ತು ಹಂಚಿಕೆ ಮಾಡಲು ಸರ್ಕಾರ ಹೆಣಗಾಡುತ್ತಿದೆ. ಸಿಎಂ ಸಿದ್ದರಾಮಯ್ಯ ಇಂದು ಬಜೆಟ್ ಮಂಡನೆ ಮಾಡಿದ್ದು, ವಿವಿಧ ಇಲಾಖೆಗೆ ಅನುದಾನ ಘೋಷಣೆ ಮಾಡಿದ್ದಾರೆ.
ಯಾವ ಇಲಾಖೆಗೆ ಎಚ್ಟು ಹಣ ಸಿಕ್ಕಿದೆ ಎಂಬುದನ್ನು ನೋಡುವುದಾದರೆ ಶಿಕ್ಷಣ ಇಲಾಖೆಗೆ 37,000 ಕೋಟಿ ಅನುದಾನ ಮೀಸಲು, ಸಮಾಜ ಕಲ್ಯಾಣ ಇಲಾಖೆ 11,000 ಕೋಟಿ ಮೀಸಲು, ಲೋಕೋಪಯೋಗಿ ಇಲಾಖೆ 10,000 ಕೋಟಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆ 5,800 ಕೋಟಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ 24,000 ಕೋಟಿ, ಇಂಧನ ಇಲಾಖೆ 22,000 ಕೋಟಿ, ನೀರಾವರಿ ಇಲಾಖೆ 19,000 ಕೋಟಿ, ಕಂದಾಯ ಇಲಾಖೆ 16,000 ಕೋಟಿ, ಆರೋಗ್ಯ & ಕುಟುಂಬ ಕಲ್ಯಾಣ ಇಲಾಖೆ 14,000 ಕೋಟಿ, ಸೇರಿ ಪಶು ಸಂಗೋಪನೆ & ಮೀನುಗಾರಿಕೆ ಇಲಾಖೆ 3,024 ಕೋಟಿ ಗ್ರಾಮೀಣಾಭಿವೃದ್ಧಿ & ಪಂಚಾಯತ್ರಾಜ್ ಇಲಾಖೆ 18,000 ಕೋಟಿ, ಒಳಾಡಳಿತ & ಸಾರಿಗೆ ಇಲಾಖೆ 16,000 ಕೋಟಿ ಮೀಸಲಿಡಲಾಗಿದೆ.