ಬೆಂಗಳೂರು : ಆಳಂದ ಶಾಸಕ ಬಿ.ಆರ್. ಪಾಟೀಲ್ ಪತ್ರ ಬರೆದು ಅಸಮಾಧಾನ ಹೊರ ಹಾಕಿರುವ ವಿಚಾರ ಮತ್ತೆ ತಲೆನೋವು ತಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವ ಅವರು, ರಾಜೀನಾಮೆ ಬಗ್ಗೆ ಪ್ರಸ್ತಾಪಿಸಿದ್ದಾರೆ.
ಈ ಹಿನ್ನೆಲೆ ಡ್ಯಾಮೇಜ್ ಕಂಟ್ರೋಲ್ಗೆ ಮುಂದಾದ ಸಿಎಂ ಸಿದ್ದರಾಮಯ್ಯ ಪತ್ರ ಬರೆದ ಬಿ.ಆರ್. ಪಾಟೀಲ್ ಗೆ ಬುಲಾವ್ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ನಿನ್ನೆ ಪೋನ್ ಮಾಡಿದಾಗ ಬಿ.ಆರ್ ಪಾಟೀಲ್ ಸಿಗಲಿಲ್ಲ. ಇಂದು ಪೋನಿನಲ್ಲಿ ಅವರೊಂದಿಗೆ ಮಾತನಾಡಿದ್ದೇನೆ ಎಂದರು. ಅವರನ್ನು ಬರಲು ಹೇಳಿದ್ದೇನೆ. ಈ ಬಗ್ಗೆ ಅವರ ಜೊತೆ ಮಾತನಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಇನ್ನೂ, ನಾನು ಬಿ.ಆರ್. ಪಾಟೀಲ್ ಅವರು ತಪ್ಪಿತಸ್ಥರು ಎಂಬಂತೆ ಸದನದಲ್ಲಿ ಮಾತನಾಡಲೇ ಇಲ್ಲ. ನಾನು ಮಾತನಾಡಿರುವ ದಾಖಲೆ ಕೂಡ ಇದೆ. ಇದನ್ನು ಯಾರು ಬೇಕಾದರೂ ಪರಿಶೀಲನೆ ಮಾಡಬಹುದು ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.ಆರೋಪ ಸಾಬೀತಾದರೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಲು ಸಿದ್ಧವಿದ್ದೇನೆ ಎಂದು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ಪಾಟೀಲ್ ಮನವಿ ಮಾಡಿದ್ದಾರೆ.